Kantara Reels : ಪಂಜುರ್ಲಿ ದೈವದ ರೀಲ್ಸ್‌ ಮಾಡಿದ ಯುವತಿ ಧರ್ಮಸ್ಥಳದಲ್ಲಿ ತಪ್ಪೊಪ್ಪಿಗೆ! | Vijay Karnataka

Поделиться
HTML-код
  • Опубликовано: 25 авг 2024
  • ಮಂಗಳೂರು: ಕಾಂತಾರ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ ಸ್ಟ್ರಾಗ್ರಾಂನಲ್ಲಿ ಹಾಕಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಇದೀಗ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.
    ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ಎಸ್.ರೆಡ್ಡಿ ಎಂಬ ಯುವತಿ ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ತನ್ನ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಳು. ತುಳುನಾಡಿನ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್ ಆಗುತ್ತಿದ್ದಂತೆ ಇದರ ವಿರುದ್ದ ತುಳುವರಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಇದೀಗ ಆಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಆಗಮಿಸಿ ದೇವಸ್ಥಾನದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆ ಕೇಳಿದ್ದಾಳೆ ಎಂದು ತಿಳಿದುಬಂದಿದೆ.
    #kantara #kantaramovie #rishabshetty
    Our Website : Vijaykarnataka...
    Facebook: / vijaykarnataka
    Twitter: / vijaykarnataka

Комментарии •