||ಬೋಳದ ಗುತ್ತು ಕಂಬಳ ಕೋಣದ ವಿಶೇಷ ಸಂಚಿಕೆ EPISODE -1 || BOLADA GUTTU KMBALA KONA EPISODE -1 ||

Поделиться
HTML-код
  • Опубликовано: 12 сен 2024
  • ಕಂಬಳಕ್ಕೆ ನೂರಾರು ವರ್ಷಗಳ ಇತಿಹಾಸವಿದೆ . ಹಿಂದಿನ ಕಾಲದಲ್ಲಿ ರಾಜರುಗಳ ಬೆಂಬಲ ಮತ್ತು ಪ್ರೋತ್ಸಾಹದೊಂದಿಗೆ ಈ ಕ್ರೀಡೆ ನಡೆಯುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳುಮೆಗಾಗಿ ಕೋಣಗಳನ್ನು ಬಳಸುವುದು ಸಾಮಾನ್ಯ. ಅವುಗಳಲ್ಲಿ ಬಲಿಷ್ಠವಾದವುಗಳ ಮಧ್ಯೆ ಓಟದ ಸ್ಪರ್ಧೆ ಏರ್ಪಡಿಸಿ ವಿಜೇತರಾದವರನ್ನು ಸನ್ಮಾನಿಸುವದರ ಹಿಂದೆ ಕೃಷಿಕರ ಕ್ರೀಡಾ ಮನೋಭಾವಕ್ಕೆ ಇಂಬು ಕೊಡುವ ಉದ್ದೇಶ ಸ್ಪಷ್ಟ. ಅಂತೆಯೇ ಕೋಣಗಳನ್ನು ಚೆನ್ನಾಗಿ ಸಲಹಲು ಇದೊಂದು ನೆವವೂ ಹೌದು. ಭತ್ತದ ಮೊದಲ ಕೊಯಿಲಿನ ನಂತರ ಈ ಕ್ರೀಡೆ ನಡೆಯುತ್ತದೆ. ನವೆಂಬರ್-ಡಿಸೆಂಬರ್ ನಂತರದ ಛಳಿಗಾಲದಲ್ಲಿ ಆರಂಭವಾಗುವ ಕಂಬಳ ಕರಾವಳಿಯ ಬಿಸಿಲ ಬೇಗೆ ಏರುವ ಮೊದಲೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯುತ್ತದೆ. ಇದನ್ನು ನೋಡಿದರೆ ಕೃಷಿಕರಿಗೆ ಮನರಂಜನೆ ಒದಗಿಸುವ ಸಾಧನವಾಗಿಯೂ ಕಂಬಳ. ಕಂಬಳದ ಕೋಣಗಳನ್ನು ಸಾಕುವುದೂ, ಸ್ಪರ್ಧಿಸುವುದೂ, ವಿಜಯಿಯಾಗುವುದೂ ಪ್ರತಿಷ್ಠೆಯ ಸಂಕೇತವೂ ಹೌದು...

Комментарии • 94