ಗದಗಿನ ಐತಿಹಾಸಿಕ ಫಕೀರೇಶ್ವರ ಮಠಕ್ಕೆ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀ ನೇಮಕ | Vijay Karnataka

Поделиться
HTML-код
  • Опубликовано: 12 сен 2024
  • ಗದಗದ ಶಿರಹಟ್ಟಿ ಫಕೀರೇಶ್ವರ ಮಠ ಅಂದ್ರೆ ಅದು ಉತ್ತರ ಕರ್ನಾಟಕದ ಹಿಂದೂ- ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾದ ಪ್ರಸಿದ್ಧ ಮಠ. ಐತಿಹಾಸಿಕ ಮಠದಲ್ಲಿ ಈಗ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಶ್ರೀ ಮಠಕ್ಕೆ ಶುಕ್ರವಾರ ನೂತನ ಉತ್ತರಾಧಿಕಾರಿಯನ್ನಾಗಿ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸರು ಮಠದ ಶ್ರೀಗಳಾದ ದಿಂಗಾಲೇಶ್ವರ ಸ್ವಾಮೀಜಿಗಳನ್ನು ನೇಮಕ ಮಾಡಲಾಯಿತು.
    ಶುಕ್ರವಾರ ಮಠಾಧೀಶರು ಹಾಗೂ ಸಾವಿರಾರೂ ಭಕ್ತ ಸಮೂಹದ ನಡುವೆ ದಿಂಗಾಲೇಶ್ವರ ಶ್ರೀಗಳನ್ನು ಉತ್ತರಾಧಿಕಾರಿಗಳನ್ನಾಗಿ ನೇಮಕ ಮಾಡಲಾಯಿತು. ಶಿರಹಟ್ಟಿ ಫಕ್ಕೀರೇಶ್ವರ ಮಠದ ಪಟ್ಟಾಧ್ಯಕ್ಷರಾದ ಫಕೀರ ಸಿದ್ದರಾಮ ಮಹಾಸ್ವಾಮಿಗಳ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳನ್ನು ನೇಮಕ ಮಾಡಿದ್ದಾರೆ. ಪಟ್ಟಾಧ್ಯಕ್ಷರಾದ ಶ್ರೀ ಫಕ್ಕೀರೇಶ್ವರ ಸಿದ್ದರಾಮ ಮಹಾಸ್ವಾಮಿಗಳು, ಮೂಲ ಕರ್ತೃ ಗದ್ದುಗೆ ಪ್ರೇರಣೆಯಂತೆ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಎರಡು ತಿಂಗಳಿಂದ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳನ್ನು ಮಾಡುವಂತೆ ಕರ್ತೃ ಗದ್ದುಗೆ ಪ್ರೇರಣೆ ಆಗುತ್ತಿತ್ತು. ಹಾಗಾಗಿ ಬಾಲೆಹೊಸರು ಗ್ರಾಮದ ಭಕ್ತರು ಹಾಗೂ ಶಿರಹಟ್ಟಿ ಫಕ್ಕೀರೇಶ್ವರ ಮಠದ ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಉತ್ತರಾಧಿಕಾರಿಯಾಗಿ ನೇಮಕ ಮಾಡಿ ಘೋಷಣೆ ಮಾಡಿದ್ದಾರೆ.
    ಶಿರಹಟ್ಟಿ ಪಟ್ಟಣದ ಫಕೀರೇಶ್ವರ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತರಾಧಿಕಾರಿಯಾಗಿ ನೇಮಕವಾದ ಬಳಿಕ ಬಾಲೆಹೊಸರು ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಶ್ರೀ ಮಠದ ಪರಂಪರೆಯಂತೆ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಎಂದು ನಾಮಕರಣ ಮಾಡಲಾಯಿತು. ದಿಂಗಾಲೇಶ್ವರ ಶ್ರೀಗಳು ಮೊದಲಿನ ಕಾವಿ ವಸ್ತ್ರಗಳು ತೆಗೆದು ಫಕೀರೇಶ್ವರ ಮಠದ ಸಂಪ್ರದಾಯದಂತೆ ವಸ್ತ್ರವಿನ್ಯಾಸ ತೊಟ್ಟು ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ರು. ಈಗಿನ ಪಟ್ಟಾಧ್ಯರಾದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಹಿರಿಯ ಶ್ರೀಗಳಾಗಿ, ಉತ್ತರಾಧಿಕಾರಿಯಾಗಿ ನೇಮಕವಾದ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಕಿರಿಯ ಶ್ರೀಗಳಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ‌.
    #Gadag #DingaleshwaraSri #FakireshwaraMath
    Our Website : Vijaykarnataka...
    Facebook: / vijaykarnataka
    Twitter: / vijaykarnataka

Комментарии • 12